ಪಂಚಾಯಿತಿಗೊಂದು ಕೆಪಿಎಸ್ ಶಾಲೆ
ರಾಮನಗರ: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಜಿಲ್ಲೆಯ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವರ್ಷ ತಲಾ 15 ಕೋಟಿ ವೆಚ್ಚದಲ್ಲಿ 5 ಶಾಲೆಗಳನ್ನು ಪ್ರಾರಂಭವಾಗುತ್ತಿದ್ದು ಈಗಾಗಲೇ ಚಾಲನೆ ಕೂಡ ದೊರೆತಿದೆ ಎಂದು ಶಾಸಕ ಇಟ್ಬಾಲ್ ಹುಸೇನ್ ಹೇಳಿದರು. ಕೆಲವೊಂದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ. 3 ಮಕ್ಕಳಿಗೆ 2 ಶಿಕ್ಷಕರು ಪಾಠ ಮಾಡಬೇಕಾದ ಸ್ಥಿತಿ ಇದೆ. ಅಂತೆಯೇ ಮಕ್ಕಳು ಹೆಚ್ಚಿರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಇದನ್ನು ತಪ್ಪಿಸುವ ಸಲುವಾಗಿ ಸಣ್ಣಪುಟ್ಟ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೆ ಒಂದು ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಿ ಎಲ್ಲಾ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದರು. ಶಿಥಿಲಗೊಂಡಿರುವ ಗುರುಭವನ ಕಟ್ಟಡವನ್ನು ನೆಲಸಮಗೊಳಿಸಿ, 2-3 ಕೋಟಿ ಅನುದಾನತಂದು ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು ಮುಂಬರುವ ದಿನಗಳಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅದೇ ಕಟ್ಟಡದಲ್ಲಿ ಆಚರಿಸುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.